ಬೆಂಗಳೂರು: ಮಂಗಳೂರಿನ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮಂಗಳೂರು ತಾಲ್ಲೂಕಿನ ದೇರೆಬೈಲ್‌ನಲ್ಲಿರುವ ಬ್ಲೂ ಬೆರಿ ಹಿಲ್ಸ್ ರಸ್ತೆಯ ಸರ್ವೆ ನಂಬರ್ 129 ಮತ್ತು 113 ರಲ್ಲಿನ 3.285 ಎಕರೆ ಭೂಮಿಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿದೆ
ಐಟಿ-ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸಪ್ಟೆಂಬರ್ 24ರಂದು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಟೆಕ್ ಪಾರ್ಕ್ ನಿರ್ಮಾಣಕ್ಕೆ ಅನುಮತಿ ನೀಡುವ ಬಗ್ಗೆ ಪ್ರಸ್ತಾಪವಾಗಿತ್ತು.
ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಟೆಕ್ ಪಾರ್ಕ್ ಅಭಿವೃದ್ಧಿ ಪಡಿಸುವ ಸಂಬಂಧ ಅನುಮೋದನೆ ನೀಡಿದೆ.


