Saturday, October 17, 2026
Homeತಾಜಾ ಸುದ್ದಿಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ; ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ

ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ; ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ

- Advertisement -
- Advertisement -

ಬೆಂಗಳೂರು: ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತು ಚಕ್ರ ರಜೆ ನೀಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ‌ ಋತು ಚಕ್ರ ರಜೆ ನೀತಿ ಜಾರಿ ಮಾಡಲು ಅನುಮೋದನೆ ನೀಡಲಾಗಿದೆ.

ರಾಜ್ಯದ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ ಗಳು, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಖಾಸಗಿ ಕೈಗಾರಿಕಾ ವಲಯಗಳಲ್ಲಿ ಅನ್ವಯ ಆಗುವಂತೆ ಋತುಚಕ್ರ ರಜೆ‌ ನೀತಿ ಜಾರಿಯಾಗಲಿದೆ.

ಬಿಹಾರ, ಕೇರಳ ಮತ್ತು‌ ಒಡಿಶಾ ರಾಜ್ಯಗಳಲ್ಲಿ ಈಗಾಗಲೇ ವೇತನ ಸಹಿತ ಋತುಚಕ್ರ ರಜೆ ನೀತಿ ಜಾರಿಯಲ್ಲಿದೆ.

- Advertisement -

Latest News

error: Content is protected !!