- Advertisement -
![]()
- Advertisement -
ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಅನುಮತಿ ಕೊಟ್ಟಿದ್ದಾರೆ ಅಂದರೆ ನಾಯಕತ್ವ ಬದಲಾವಣೆ ಇಲ್ಲ ಅಂತ ಅರ್ಥ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಸಚಿವ ಸಂಪುಟ ಪುನರ್ ರಚನೆ ಅಂದಾಗ ಸಾಮಾನ್ಯವಾಗಿ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದಿದ್ದಾರೆ.
ಸಚಿವ ಸಂಪುಟ ಪುನರ್ ರಚನೆ ಬಹಳ ದಿನದ ಬೇಡಿಕೆಯಾಗಿದ್ದು, ಬಹಳ ಜನ ಶಾಸಕರು ಮಂತ್ರಿಗಳಾ ಗಬೇಕು ಅಂತ ಅಪೇಕ್ಷೆ ಪಡುತ್ತಿದ್ದರು, ಅದರಲ್ಲಿ ದೊಡ್ಡ ವಿಚಾರ ಏನೂ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಸಮಯ ಮತ್ತು ಸಂಧರ್ಭ ನೋಡಿಕೊಂಡು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದೂ ಡಾ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
- Advertisement -


