Wednesday, June 3, 2026
Homeಕರಾವಳಿಚಾರ್ಮಾಡಿ: ಯುವವಾಹಿನಿ ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ಹಾಗೂ ಸಹಾಯಧನ ಹಸ್ತಾಂತರ

ಚಾರ್ಮಾಡಿ: ಯುವವಾಹಿನಿ ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ಹಾಗೂ ಸಹಾಯಧನ ಹಸ್ತಾಂತರ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮದಲ್ಲಿ ಲಾಕ್ ಡೌನ್ ಸಮಯದಲ್ಲಿ ತೊಂದರೆಗೊಳಗಾದ ಕುಟುಂಬಗಳಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಮನವಿ ಮೇರೆಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಿಂದ ನೀಡಿರುವ ಅಕ್ಕಿಯನ್ನು ಮತ್ತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಯಿಂದ ನೀಡಿರುವ ದಿನಸಿ ಸಾಮಾಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು.

ಹಾಗೆಯೆ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟ ದಿ.ಅಮ್ಮಿ ಪೂಜಾರಿ ಬಿಟೀಗೆಯವರ ಮಗಳ ಮದುವೆಗೆ ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನೀಡಿರುವ ಸಹಾಯಧನವನ್ನು ಹಸ್ತಾಂತರಿಸಲಾಯಿತು .

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಉಪಾಧ್ಯಕ್ಷರಾದ ಮನೋಹರ್ ಕುಮಾರ್ ಇಳಂತಿಲ, ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕರಾದ ಪ್ರಶಾಂತ್ ಮಚ್ಚಿನ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ನಿರ್ದೇಶಕ ದಯಾನಂದ ಪೊಂರ್ಗದಡಿ, ಯುವವಾಹಿನಿ ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಯಶೋಧರ ಚಾರ್ಮಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ ಅಧ್ಯಕ್ಷರಾದ ನಾರಾಯಣ ಪೂಜಾರಿ, ಉಜಿರೆ ಜಿಲ್ಲಾ ಪಂಚಾಯತ್ ಸದಸ್ಯರಾದ ನಮಿತ, ಯುವವಾಹಿನಿ ಬೆಳ್ತಂಗಡಿ ಘಟಕದ ಸಲಹೆಗಾರರಾದ ಹರೀಶ್ ಬರಮೇಲು, ಉಪಸ್ಥಿತರಿದ್ದರು.

- Advertisement -

Latest News

error: Content is protected !!