Tuesday, July 2, 2024
Homeಕರಾವಳಿಕ್ಯಾಂಪ್ಕೋ ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

spot_img
- Advertisement -
- Advertisement -

ವಿಟ್ಲ: ಕ್ಯಾಂಪ್ಕೋ ಮಾಜಿ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲ ಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು (67) ಅವರು ಜೂ.30 ಭಾನುವಾರದಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಎಲ್.ಎನ್.ಕೂಡೂರು ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು.

ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಮಾಜಿ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಶ್ರೀರಾಮಚಂದ್ರಾಪುರ ಮಠದ ಹೊಸನಗರ ಚಂದ್ರಮೌಳೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

- Advertisement -
spot_img

Latest News

error: Content is protected !!