Saturday, June 6, 2026
Homeತಾಜಾ ಸುದ್ದಿಧರ್ಮಸ್ಥಳ: ಕೋವಿಡ್-19ರ ಮಾರ್ಗಸೂಚಿಯ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆನ್‌ಲೈನ್ ಬುಕ್ಕಿಂಗ್‌ಗಳಾದ ಸೇವೆಗಳು ರದ್ದು

ಧರ್ಮಸ್ಥಳ: ಕೋವಿಡ್-19ರ ಮಾರ್ಗಸೂಚಿಯ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆನ್‌ಲೈನ್ ಬುಕ್ಕಿಂಗ್‌ಗಳಾದ ಸೇವೆಗಳು ರದ್ದು

- Advertisement -
- Advertisement -

ಧರ್ಮಸ್ಥಳ: ಕೋವಿಡ್-19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ಪ್ರಕಟಿಸಿದ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾಡಳಿತದ ಮುಂದಿನ ಆದೇಶದ ವರೆಗೆ ಆನ್‌ಲೈನ್ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ.

ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ದೇವಸ್ಥಾನದ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇತರ ದಿನಗಳಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ.

- Advertisement -

Latest News

error: Content is protected !!