Wednesday, June 24, 2026
Homeತಾಜಾ ಸುದ್ದಿಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ: ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ: ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

- Advertisement -
- Advertisement -

ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್‌ ತಿಳಿಸಿದ್ದಾರೆ.

ಮೊಟ್ಟೆಯ ಬಗ್ಗೆ ಆತಂಕ ಪಡುವುದು ಬೇಡ. ಕಳೆದ ಸೆಪ್ಟೆಂಬರ್‌, ಅಕ್ಟೋಬರ್‌ನಲ್ಲಿ 125 ಮೊಟ್ಟೆಗಳ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. 123 ಮೊಟ್ಟೆಗಳ ಮಾದರಿ ಗುಣಮಟ್ಟ ಸರಿಯಿದೆ. ಒಂದೆರೆಡು ಮೊಟ್ಟೆಯ ಸ್ಯಾಂಪಲ್‌ ಮಾತ್ರ ಸರಿ ಇಲ್ಲ ಎಂದು ವರದಿ ಬಂದಿತ್ತು. ಇದರಿಂದ ಆತಂಕಕ್ಕೊಳಗಾಗುವುದು ಬೇಡ ಎಂದರು. ಇನ್ನು ಮೊಟ್ಟೆಯ ಬಗ್ಗೆ ಗೊಂದಲವಿದ್ದರೆ ತಿಳಿದುಕೊಳ್ಳಬೇಕು. ಈಗಾಗಲೇ ಆ ಕಂಪನಿಯ ಮೊಟ್ಟೆ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದ್ದಾರೆ. ಪರೀಕ್ಷಿಸಿದ ನಂತರ ನಿರ್ದಿಷ್ಟ ವಿಚಾರ ತಿಳಿದುಬರಲಿದೆ. ಅಲ್ಲಿಯವರೆಗೂ ಸಮಾಧಾನದಿಂದ ಇರೋಣ. ಏಕೆಂದರೆ ಮೊಟ್ಟೆ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದರು.

- Advertisement -

Latest News

error: Content is protected !!