Saturday, April 27, 2024
Homeತಾಜಾ ಸುದ್ದಿನಾಳೆಯಿಂದ ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ವಿಧಿಸಲ್ಪಟ್ಟಿವೆ ಹಲವು ನಿರ್ಬಂಧಗಳು

ನಾಳೆಯಿಂದ ಸಿಇಟಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ವಿಧಿಸಲ್ಪಟ್ಟಿವೆ ಹಲವು ನಿರ್ಬಂಧಗಳು

spot_img
- Advertisement -
- Advertisement -

ಬೆಂಗಳೂರು: ನಾಳೆ ಮತ್ತು‌ ನಾಡಿದ್ದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಎಲ್ಲಾ ನಿರ್ಬಂಧಗಳನ್ನೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವಿಧಿಸಿರುವ ನಿರ್ಬಂಧಗಳು ಈ ರೀತಿಯಾಗಿವೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು. ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ನಮೂದಿಸಬೇಕು

ಮೊದಲ ಗಂಟೆ ಬಾರಿಸಲಿರುವ ನಿಗದಿತ ಅವಧಿಗಿಂತಲೂ ಅರ್ಧ ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು . ವಿದ್ಯಾರ್ಥಿಗಳು ತಮ್ಮ ಪ್ರವೇಶಪತ್ರ (ಅಡ್ಮಿಶನ್ ಟಿಕೆಟ್) ಮತ್ತು ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರವನ್ನು ತರಬೇಕು (ಕಾಲೇಜಿನ ಗುರುತುಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್/ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/12ನೇ ತರಗತಿಯ ಪ್ರವೇಶ ಪತ್ರ ಇತ್ಯಾದಿಗಳ ಪೈಕಿ ಒಂದು).

ಯಾವುದೇ ತರಹದ ಕೈಗಡಿಯಾರಗಳನ್ನು ಕಟ್ಟಿಕೊಂಡು ಬರುವಂತಿಲ್ಲ. ಟ್ಯಾಬ್, ಮೊಬೈಲ್, ಕ್ಯಾಲ್ಕುಲೇಟರುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ.

- Advertisement -
spot_img

Latest News

error: Content is protected !!