Saturday, May 11, 2024
Homeಕರಾವಳಿಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ

ಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು : ಮಾರ್ಚ್ 9 ರಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗುತ್ತಿದ್ದು  ಹಿಜಾಬ್ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಅಂತಹ ವಿನಂತಿಗಳನ್ನು ಪರಿಗಣಿಸದಂತೆ ಸೂಚನೆಗಳನ್ನು ನೀಡಿದೆ.

ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಲು ಅನುಮತಿ ಕೋರಿದ್ದಾರೆ.

ಈ ವಿಷಯ ಸುಪ್ರೀಂ ಕೋರ್ಟ್ ನಲ್ಲಿರುವುದರಿಂದ ಪರೀಕ್ಷೆ ಸಮಯದಲ್ಲಿ ಹಿಜಾಬ್ ಗೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ, ಈ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿ ಪರೀಕ್ಷೆಗಳನ್ನು ತಪ್ಪಿಸಿಕೊಳ್ಳುತ್ತಾಳೆ ಎಂದು ನಾವು ಭಾವಿಸುವುದಿಲ್ಲ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!