- Advertisement -
![]()
- Advertisement -
ಮಂಗಳೂರು: ಡಿವೈಡರ್ ಹಾರಿ ವಾಹನಗಳಿಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಘಟನೆ ಮಂಗಳೂರು ನಗರದ ಬಳ್ಳಾಲ್ ಭಾಗ್ ಎಂಬಲ್ಲಿ ನಡೆದಿದೆ.

ಡಿವೈಡರ್ ಗೆ ಡಿಕ್ಕಿ ಹೊಡೆದು ಹಾರಿದ ಕಾರು ರಸ್ತೆಯ ಇನ್ನೊಂದು ಬದಿಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಮತ್ತು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತೆರುತ್ತಿದ್ದ ಮಹಿಳೆಯ ಗಂಭೀರ ಗಾಯಗೊಂಡಿದ್ದಾರೆ. ಇನ್ನು ಡಿವೈಡರ್ ನಲ್ಲಿ ನಿಂತಿದ್ದೆ ಮಹಿಳೆ ಕೂದಲೆಲೆ ಅಂತರದಲ್ಲಿ ಪಾರಾಗಿದ್ದಾರೆ. ಇನ್ನು ಮದ್ಯದ ಅಮಲಿನಲ್ಲಿ ಚಾಲಕ ಕಾರು ಚಲಾಯಿಸಿರುವ ಶಂಕೆ ವ್ಯಕ್ತವಾಗಿದೆ.BMW ಕಾರು ಚಾಲಕನಿಗೆ ಅಪಘಾತದ ಕ್ಷಣದಲ್ಲೇ ಸಾರ್ವಜನಿಕರು ಸೇರಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರು ಪೊಲೀಸರು ಕಾರು ಚಾಲಕನ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರ ದಲ್ಲಿ ಸೆರೆಯಾಗಿದೆ.

- Advertisement -


