Wednesday, June 3, 2026
Homeತಾಜಾ ಸುದ್ದಿಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ತಡೆಗೊಡೆಗೆ ಡಿಕ್ಕಿ ಹೊಡೆದ ಕಾರು

ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ತಡೆಗೊಡೆಗೆ ಡಿಕ್ಕಿ ಹೊಡೆದ ಕಾರು

- Advertisement -
- Advertisement -

ಬೆಳ್ತಂಗಡಿ:  ಚಾಲಕನ ನಿಯಂತ್ರಣ ತಪ್ಪಿದ ಐ-20 ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಇನ್ನು ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಕೂತಿದೆ.


ತಡೆಗೋಡೆ ಇಲ್ಲದಿದ್ದರೆ 300 ಅಡಿ ಪ್ರಪಾತಕ್ಕೆ ಬಿದ್ದು, ದೊಡ್ಡ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು. ಇನ್ನು ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!