Thursday, June 4, 2026
Homeಕರಾವಳಿಉಡುಪಿಕಾರ್ಕಳದ ಹೆಬ್ರಿಯಲ್ಲಿ ಕಾರು ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಕಾರ್ಕಳದ ಹೆಬ್ರಿಯಲ್ಲಿ ಕಾರು ಅಪಘಾತ: ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಡುಪಿ: ಭೀಕರ ಕಾರು ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಕಾರ್ಕಳದ ಹೆಬ್ರಿ ತಾಲೂಕು ವ್ಯಾಪ್ತಿಯ ಹೆಬ್ರಿ ಅಂಡಾರು ಕರಿಯಾಲು ಕ್ರಾಸ್‌ ಬಳಿ ನಡೆದಿದೆ.

ಕಾರ್ಕಳ ಅಜೆಕಾರು ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು  ಬೆಂಗಳೂರಿನಿಂದ ಕೆರುವಾಶೆಯ ಮೂಲಕ ಅಜೆಕಾರಿಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಪೈಕಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!