Saturday, June 6, 2026
Homeಕರಾವಳಿಉಡುಪಿಉಡುಪಿ: ಹೊಂಡಕ್ಕೆ ಬಿದ್ದು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಕಾರು

ಉಡುಪಿ: ಹೊಂಡಕ್ಕೆ ಬಿದ್ದು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ‌ ಹೊಡೆದ ಕಾರು

- Advertisement -
- Advertisement -

ಉಡುಪಿ: ಇಂದು ಬೆಳಗ್ಗೆ ರಸ್ತೆ‌ಯ ಹೊಂಡಕ್ಕೆ ಬಿದ್ದ ಕಾರೊಂದು ಬಳಿಕ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ‌ ರಾಷ್ಟ್ರೀಯ ಹೆದ್ದಾರಿ‌ 66ರಲ್ಲಿ ನಡೆದಿದೆ.

ಕಾರು ಢಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಎರಡು ತುಂಡಾಗಿ ರಸ್ತೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿದ್ದರಿಂದ ಕಾರು ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕಾರು ಚಾಲಕಿ ಅಪಾಯದಿಂದ ಪಾರಾಗಿದ್ದು, ಅವರು ಮಣಿಪಾಲಕ್ಕೆ ಕೆಲಸಕ್ಕೆ ತೆರಳುತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

Latest News

error: Content is protected !!