Friday, June 5, 2026
Homeತಾಜಾ ಸುದ್ದಿಕಾಪು: ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಐದು ಮಂದಿಗೆ ಗಾಯ

ಕಾಪು: ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಐದು ಮಂದಿಗೆ ಗಾಯ

- Advertisement -
- Advertisement -

ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 66ರ ಕಾಪು ಹಳೇ ಮೆಸ್ಕಾಂ ಕಛೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಯ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಕಾರು ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ವಿದ್ಯುತ್ ಕಂಬ ಉರುಳಿ ಬಿದ್ದಿದೆ.

ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಎಸ್ಸೈ ರಾಜಶೇಖರ ಬಿ. ಸಾಗನೂರು, ಕ್ರೈಂ ಎಸ್ಸೈ ಐ.ಆರ್. ಗಡ್ಡೇಕರ್ ಮೊದಲಾದವರು ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!