Friday, June 26, 2026
Homeಕರಾವಳಿಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ – ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರು, 9 ವರ್ಷದ ಮಗು...

ಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ – ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರು, 9 ವರ್ಷದ ಮಗು ಸಾವು

- Advertisement -
- Advertisement -

ಪುತ್ತೂರು: ನಗರದ ಹೊರವಲಯದ ಬೈಪಾಸ್ ರಸ್ತೆಯ ದರ್ಬೆಯ ಸಮೀಪ ಕೇರಳ ನೋಂದಣಿಯ ಸ್ವಿಫ್ಟ್ ಕಾರೊಂದು ಚಾಲಕನ ಅತಿ ವೇಗದ ಚಾಲನೆಯಿಂದಾಗಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ 9 ವರ್ಷದ ಮಗು ಸಾವನ್ನಪ್ಪಿದೆ.

ಕಾರು ಮಂಗಳೂರಿನ ಕಡೆಯಿಂದ ಬಂದು ಪುತ್ತೂರು ದರ್ಬೆಯ ಮೂಲಕ ಸಾಗುತ್ತಿದ್ದಾಗ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಇಬ್ಬರು ಮಕ್ಕಳು ಮತ್ತು ಮಹಿಳೆಯ ಮೇಲೆ ಹರಿದಿದೆ. ಕೂಡಲೇ ಮೂವರನ್ನೂ ಸ್ಥಳೀಯರು ಅಲ್ಲಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ, ಒಂದು ಮಗು ಸಾವನ್ನಪ್ಪಿದ್ದು ಇನ್ನೊಂದು ಆರು ವರ್ಷದ ಮಗುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯನ್ನು ಪುತ್ತೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!