Saturday, May 18, 2024
Homeಕರಾವಳಿಮಂಗಳೂರು; ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಚಲಿಸಿದ ಕಾರು; ನಾಲ್ವರಿಗೆ ಗಂಭೀರ ಗಾಯ

ಮಂಗಳೂರು; ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಚಲಿಸಿದ ಕಾರು; ನಾಲ್ವರಿಗೆ ಗಂಭೀರ ಗಾಯ

spot_img
- Advertisement -
- Advertisement -

ಮಂಗಳೂರು; ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಕಾರು ಚಲಿಸಿದ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.

ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮೂರು ದನಗಳು ಸಾವಿಗೀಡಾಗಿವೆ ಎನ್ನಲಾಗಿದೆ. ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು.

- Advertisement -
spot_img

Latest News

error: Content is protected !!