Friday, June 5, 2026
Homeಕರಾವಳಿಬಂಟ್ವಾಳದಲ್ಲಿ ಕಾರು ಡಿಕ್ಕಿಯಾಗಿ 4 ವರ್ಷದ ಬಾಲಕ ಸಾವು

ಬಂಟ್ವಾಳದಲ್ಲಿ ಕಾರು ಡಿಕ್ಕಿಯಾಗಿ 4 ವರ್ಷದ ಬಾಲಕ ಸಾವು

- Advertisement -
- Advertisement -

ಬಂಟ್ವಾಳ: ಕಾರು ಢಿಕ್ಕಿಯಾಗಿ ನಾಲ್ಕು ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಬಂಟ್ವಾಳ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಇಂದು ಸಂಜೆ ನಡೆದಿದೆ.

 ಮಹಮ್ಮದಲಿ ಸಖಾಫಿ ಎಂಬವರ ಮಗ ಆದಿಲ್ (4) ಮೃತಪಟ್ಟ ಬಾಲಕ. ಖಾಸಗಿ ಆಂಗ್ಲ ಮಾದ್ಯಮ ಶಾಲೆಯ ಎಲ್.ಕೆ.ಜಿ. ಓದುತ್ತಿದ್ದ ಆದಿಲ್ ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾರುತಿ ಕಾರೊಂದು ಢಿಕ್ಕಿ ಹೊಡೆದಿದೆ. ಪರಿಣಾಮ ಪುಟ್ಟ ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿದೆ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!