Friday, June 5, 2026
Homeಕರಾವಳಿಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು, ಚಾಲಕ ಸಾವು

ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು, ಚಾಲಕ ಸಾವು

- Advertisement -
- Advertisement -

ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದ ಪರಿಣಾಮ, ಚಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮತಡ್ಕ ಬಳಿ ನಡೆದಿದೆ.ಹಾವೇರಿ ಮೂಲದ ಶ್ರೀಧರ್ ಮೃತ ದುರ್ದೈವಿ.


ಮನೋಜ್ ಕುಮಾರ್ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದೆ. ಪರಿಣಾಮ ಚಾಲಕ ಶ್ರೀಧರ ಗಂಭೀರ ಗಾಯಗೊಂಡಿದ್ದಾರೆ. ಅವರಿಗೆ ಉಜಿರೆಯ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!