Saturday, June 13, 2026
Homeಕರಾವಳಿಉಡುಪಿಉಡುಪಿಯ ಹಿರಿಯಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು, ಇಬ್ಬರಿಗೆ ಗಾಯ

ಉಡುಪಿಯ ಹಿರಿಯಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು, ಇಬ್ಬರಿಗೆ ಗಾಯ

- Advertisement -
- Advertisement -

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ ಕೂಲಿ ಕಾರ್ಮಿಕರೊಬ್ಬರಿಗೆ ಗಾಯವಾಗಿದೆ.

ಕಾರು ಚಾಲಕ ಹರಿಣ್ ಶೆಟ್ಟಿ ಎಂಬವರು ಕಾರ್ಕಳದಿಂದ ಉಡುಪಿ ಕಡೆಗೆ ಬರುತ್ತಿದ್ದ ವೇಳೆ ಹಿರಿಯಡ್ಕದ ಕೊಂಡಾಡಿಯ ಭಜನೆಕಟ್ಟೆ ಸಮೀಪಿಸುತ್ತಿದ್ದಂತೆ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿರುವ ಪುತ್ತು ನಾಯಕ್ ಎಂಬವರ ಮನೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಒಂದು ಭಾಗ ಸಂಪೂರ್ಣ ಕುಸಿದುಬಿದ್ದಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಅಲ್ಲಿಯೇ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೂ ಗಾಯವಾಗಿದೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!