- Advertisement -
- Advertisement -
ಸುಳ್ಯ; ;ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ನಡೆದಿದೆ.
ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರ್ ಅಡ್ಕಾರಿನ ಕರಾವಳಿ ಹೊಟೇಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ, ಬಳಿಕ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೂಡ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕಾರ್ಮಿಕರು ಗಂಭೀರ ಗಾಯಗೊಂಡಿದ್ದು ಇವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -