Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರಿನಲ್ಲಿ ವರುಣನ ರೌದ್ರ ನರ್ತನ; ಒಂದೇ ಸ್ಥಳದಲ್ಲಿ ಎರಡು ವಾಹನಗಳು ಪಲ್ಟಿ

ಚಿಕ್ಕಮಗಳೂರಿನಲ್ಲಿ ವರುಣನ ರೌದ್ರ ನರ್ತನ; ಒಂದೇ ಸ್ಥಳದಲ್ಲಿ ಎರಡು ವಾಹನಗಳು ಪಲ್ಟಿ

- Advertisement -
- Advertisement -

ಚಿಕ್ಕಮಗಳೂರಿನಲ್ಲಿ ವರುಣನ ರೌದ್ರ ನರ್ತನ ಮುಂದುವರೆದಿದೆ. ಅನೇಕ ಕಡೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಸ್ತೆಯಲ್ಲೆಲ್ಲಾ ನೀರು ಹರಿಯುತ್ತಿರೋದರಿಂದ ವಾಹನ ಸವಾರರಿಗೆ ವಾಹನ ಚಲಾಯಿಸೋದೇ ಸವಾಲಾಗಿದೆ. ಹೀಗಿರುವಾಗಲೇ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಒಂದೇ ಸ್ಥಳದಲ್ಲಿ ಹೇಮಾವತಿ ನದಿಗೆ ಸ್ವಿಫ್ಟ್ ಹಾಗೂ ಇನೋವಾ ಕಾರು ಪಲ್ಟಿಯಾಗಿ ಬಿದ್ದಿದೆ.

ಇಬ್ಬರು ಚಾಲಕರ ನಿಯಂತ್ರಣ ತಪ್ಪಿ ಎರಡು ವಾಹನಗಳು ಪಲ್ಟಿಯಾಗಿವೆ.ಎರಡು ಕಾರಿನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!