Thursday, June 4, 2026
Homeಕರಾವಳಿಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ- ಚಾಲಕನಿಗೆ ಗಂಭೀರ ಗಾಯ

ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ- ಚಾಲಕನಿಗೆ ಗಂಭೀರ ಗಾಯ

- Advertisement -
- Advertisement -

ಚಿಕ್ಕಮಗಳೂರು: ಮೂಡಿಗೆರೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಚಾರ್ಮಾಡಿ ಘಾಟಿಯಲ್ಲಿ ಅಪಘಾತವಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸುಹೇಲ್ (37) ಗಂಭೀರ ಗಾಯಗೊಂಡಿದ್ದಾರೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಭಾರಿ ಮಳೆ, ಮಂಜು ಮುಸುಕಿದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಗೊಂಡಿರುವ ಕಾರು ಚಾಲಕ ಸುಹೇಲ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!