Wednesday, June 3, 2026
Homeಚಿಕ್ಕಮಗಳೂರುಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಮೂವರು ಗಾಯಗೊಂಡು ಆಸ್ಪತ್ರೆಗೆ ರವಾನೆ

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಮೂವರು ಗಾಯಗೊಂಡು ಆಸ್ಪತ್ರೆಗೆ ರವಾನೆ

- Advertisement -
- Advertisement -

ಚಿಕ್ಕಮಗಳೂರು : ಮೂಡಿಗೆರೆ ತಾಲ್ಲೂಕಿನ  ಎಸ್.ಎಲ್.ಆರ್. ಕಾಫಿ ಕ್ಯೂರಿಂಗ್ ಬಳಿ ಮಾ.8 ರಂದು ಬೆಳಿಗ್ಗೆ ಕಾರೊಂದು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ.

ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಸುದ್ಧಿ ತಿಳಿದು ಸ್ಥಳೀಯರು ಕೂಡ ಕೂಡಲೇ ನೆರವಿಗೆ ಧಾವಿಸಿದ್ದರು.ಈ ಅಪಘಾತಕ್ಕೆ ನಿಖರವಾದ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!