Tuesday, June 30, 2026
Homeಕರಾವಳಿಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ ಹಾಗೂ ಬೈಕ್ ಗೆ ಕಾರು ಡಿಕ್ಕಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ ಹಾಗೂ ಬೈಕ್ ಗೆ ಕಾರು ಡಿಕ್ಕಿ

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ ಹಾಗೂ ಬೈಕ್ ಗೆ ಕಾರು ಡಿಕ್ಕಿಯಾದ ಘಟನೆ ಸೋಮವಾರ ಫರಂಗಿಪೇಟೆಯಲ್ಲಿ ನಡೆದಿದೆ.

ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿರೋಡಿನಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಬೈಕಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಪ್ರದೀಪ್ ಸೋಮನಾಥ ಬೆಳ್ಚಾಡ, ಕಸ್ತೂರಿ, ಸಲೋರಿ ವಿನಯಕುಮಾರ್, ಕಿಶೋರಿ ವಿನಯಕುಮಾರ್ ಎಂಬವರು ಗಾಯಗೊಂಡಿದ್ದು, ಇವರ ಪೂರ್ಣವಾದ ವಿವರ ಇನ್ನೂ ಕೂಡ ತಿಳಿದುಬಂದಿಲ್ಲ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಬೇಟಿ ನೀಡಿದ್ದಾರೆ.

- Advertisement -

Latest News

error: Content is protected !!