Saturday, June 6, 2026
Homeಕರಾವಳಿಸುಳ್ಯ: ಪರಪ್ಪೆ ಬಳಿ ಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರು ಪಲ್ಟಿ; ತಾಯಿ ಹಾಗೂ ಮಗು...

ಸುಳ್ಯ: ಪರಪ್ಪೆ ಬಳಿ ಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರು ಪಲ್ಟಿ; ತಾಯಿ ಹಾಗೂ ಮಗು ಸಾವು

- Advertisement -
- Advertisement -

ಸುಳ್ಯ: ಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರು ಸ್ಕಿಡ್ ಆಗಿ ಪಲ್ಟಿಯಾಗಿ ಸುಳ್ಯದ ತಾಯಿ ಮಗು ಸಾವನ್ನಪ್ಪಿರುವ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ ಪರಪ್ಪೆ ಬಳಿ ನಡೆದಿದೆ. ಘಟನೆಯಲ್ಲಿ ಇನ್ನು  ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಪರಪ್ಪೆಯ ಶಾನ್ ಎಂಬವರ ಪತ್ನಿ ವರ್ಷದ ಶಾಹಿನಾ(28) ಹಾಗೂ ಅವರ ಪುತ್ರ(3) ಶಜಾ ಮೃತಪಟ್ಟಿದ್ದಾರೆ. ಇನೋವಾ ಕಾರಲ್ಲಿದ್ದ ಇನ್ನು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಾಸರಗೋಡು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದುಬಂದಿದೆ.

 ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ತರಲಾಗಿದೆ.

- Advertisement -

Latest News

error: Content is protected !!