Saturday, June 27, 2026
HomeUncategorizedಉಪ್ಪಿನಂಗಡಿ: ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ: ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ: ಇಬ್ಬರಿಗೆ ಗಾಯ

- Advertisement -
- Advertisement -

ಉಪ್ಪಿನಂಗಡಿ: ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಟೇಲು ಸೇತುವೆ ಬಳಿ ಇಂದು ನಡೆದಿದೆ.

ಮಾರುತಿ 800 ಕಾರು ಮತ್ತು ಸಿಫ್ಟ್ ಡಿಸೈರ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಮಾರುತಿ 800 ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸಿಫ್ಟ್ ಡಿಸೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಉಪ್ಪಿನಂಗಡಿ ಕೆಡೆಯಿಂದ ಹಳೆಗೇಟು ಕಡೆಗೆ ಬರುತ್ತಿದ್ದ 800 ಮಾರುತಿ ಕಾರು ಹಳೆಗೇಟನಿಂದ ಉಪ್ಪಿನಂಗಡಿ ಕಡೆಗೆ ಹೋಗುತ್ತಿದ್ದ ಸಿಫ್ಟ್ ಡಿಸೈರ್ ಕಾರಿಗೆ ಡಿಕ್ಕಿಯಾಗಿದೆ. ಸಿಫ್ಟ್ ಡಿಸೈರ್ ಕಾರು ರಸ್ತೆಯಂಚಿನ ತಗ್ಗು ಪ್ರದೇಶಕ್ಕೆ ಮಗುಚಿ ಬಿದ್ದಿದ್ದು ಮಾರುತಿ 800 ಕಾರು ಸಂಪೂರ್ಣ ನಜ್ಜುಗುಜ್ಜಾಗಿ ರಸ್ತೆಯಲ್ಲಿ ತಿರುಗಿ ನಿಂತಿದೆ.

- Advertisement -

Latest News

error: Content is protected !!