Saturday, June 6, 2026
Homeಕರಾವಳಿಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ, ಮಹಿಳೆ ಸಾವು

ಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿ, ಮಹಿಳೆ ಸಾವು

- Advertisement -
- Advertisement -

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ  ತಲಪಾಡಿಯಲ್ಲಿ  ನಡೆದಿದೆ. ಮೂಲತಃ ಕೇರಳ ನಿವಾಸಿ ಕೂಲಿ ಕಾರ್ಮಿಕೆ ರಾಜಮ್ಮ (60) ಮೃತ ಮಹಿಳೆ.

ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಇಂದು ಬೆಳಿಗ್ಗೆ ಸುಮಾರು 11 ಗಂಟೆ ವೇಳೆ ನಡೆದುಕೊಂಡು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕೆ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ. ಮೂರ್ತಿ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ವಾಹನದ ಪತ್ತೆಗೆ ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!