Thursday, June 4, 2026
Homeಕರಾವಳಿಉಪ್ಪಿನಂಗಡಿ : ಶಿರಾಡಿಯ ಅಡ್ಡಹೊಳೆಯಲ್ಲಿ ಕಾರು ಮತ್ತು ಬಸ್ ಮಧ್ಯೆ ಅಪಘಾತ: ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ...

ಉಪ್ಪಿನಂಗಡಿ : ಶಿರಾಡಿಯ ಅಡ್ಡಹೊಳೆಯಲ್ಲಿ ಕಾರು ಮತ್ತು ಬಸ್ ಮಧ್ಯೆ ಅಪಘಾತ: ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಉಪ್ಪಿನಂಗಡಿ: ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಉಪನ್ಯಾಸಕ ಗೋವಿಂದರಾಜ್‌ ಶರ್ಮಾ(32) ಮತ್ತು ಓಂಕಾರ್‌ ಪ್ರಸಾದ್‌ (30) ಗಾಯಗೊಂಡವರು.

ಕೆಲಸದ ಹಿನ್ನೆಲೆ ಕಾರಿನಲ್ಲಿ ಸಕಲೇಶಪುರದ ಕಡೆಗೆ ಹೋದವರು ರಾಮಕುಂಜಕ್ಕೆ ಹಿಂತಿರುಗುತ್ತಿದ್ದಾಗ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ ಹೊಡೆದಿದೆ. ಪರಿಣಾಮ ಕಾಲು ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದು, ಇಬ್ಬರನ್ನೂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!