Thursday, June 4, 2026
Homeಉತ್ತರ ಕನ್ನಡಕಾರು ಮತ್ತು ಲಾರಿ ಅಪಘಾತ: ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ

ಕಾರು ಮತ್ತು ಲಾರಿ ಅಪಘಾತ: ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ

- Advertisement -
- Advertisement -

ಕಾರವಾರ: ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವರದರಾಜ್ ಹೊಟೇಲ್ ಬಳಿ ನಡೆದಿದೆ.

ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳು ಮಹಾರಾಷ್ಟ್ರ ರಾಜ್ಯದ ಪುಣೆ ಮೂಲದವರು ಎನ್ನಲಾಗಿದೆ. ಗೋಕರ್ಣದ ಮಹಾಬಲೇಶ್ವರ ದರ್ಶನಕ್ಕೆ ಬಂದಿದ್ದ ಕುಟುಂಬ ದರ್ಶನ ಮುಗಿಸಿ ವಾಪಸ್ ಹೋಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಮೂವರು ಮಹಿಳೆಯರು ಮತ್ತು ಓರ್ವ ಪುರುಷ ಗಂಭೀರವಾಗಿ ಗಾಯಗೊಂಡಿದ್ದು, ಗೋವಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!