Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಬಸ್ – ಓಮ್ನಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಮಂಗಳೂರಿನಲ್ಲಿ ಬಸ್ – ಓಮ್ನಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು: ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಂಜೆ ರಾ.ಹೆ. 66ರಲ್ಲಿ ರಾತ್ರಿ ನಡೆದಿದೆ.

ತಪಟ್ಟವರನ್ನು ವಸಂತ (64),ಬುಜಂಗ (62) ಹಾಗೂ ಗಂಭೀರ ಗಾಯಗೊಂಡವರನ್ನು ಕೆ.ಬಾಲಕೃಷ್ಣ ಎಂದು ತಿಳಿದು ಬಂದಿದೆ.

ಇವರೆಲ್ಲರೂ ಮುಕ್ಕದ ಪಡೆ ನಿವಾಸಿಗಳು.ವಸಂತ, ಬುಜಂಗ ಮತ್ತು ಬಾಲಕೃಷ್ಣ ಅವರು ಹಳೆಯಂಗಡಿ ಪಂಡಿತ್ ಹರಿಭಟ್ ರಸ್ತೆಯಾಗಿ ರಾ.ಹೆದ್ದಾರಿ 66ರಲ್ಲಿ ವಿರುದ್ಧ ದಿಕ್ಕಿನಲ್ಲಿ ತಮ್ಮಮಾರುತಿ ಓಮ್ಮಿಯಲ್ಲಿ ಬಂದು ಮುಕ್ಕ ಪಡ್ರೆಕಡೆ ತಿರುವ ಪಡೆಯುತ್ತಿದ್ದಾಗ ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಕಾರಿಗೆ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ.ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ವಸಂತ ಮತ್ತು ಬುಜಂಗ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಲಕೃಷ್ಣ ಅವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Latest News

error: Content is protected !!