Wednesday, June 24, 2026
HomeWorldದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ; ಮೂವರು ವೈದ್ಯರ ಬಂಧನ

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ; ಮೂವರು ವೈದ್ಯರ ಬಂಧನ

- Advertisement -
- Advertisement -

ದೆಹಲಿಯ ಕೆಂಪುಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ನಡೆದ ಕಾರು ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮೂವರು ವೈದ್ಯರನ್ನು ಬಂಧಿಸಿದ್ದಾರೆ.

ಸ್ಪೋಟದಲ್ಲಿ ಹಲವರು ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೃತ್ಯದ ಹಿಂದೆ ಮಹಿಳಾ ಉಗ್ರರು, ವೈಟ್‌ ಕಾಲರ್‌ ಉಗ್ರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಡಾ.ಶಾಹಿನ್‌ ಹಾಗೂ ಡಾ.ಸಜ್ಜದ್‌ ಎಂಬುವವರೇ ಬಂಧಿತ ವೈದ್ಯರಾಗಿದ್ದಾರೆ. ಡಾ.ಶಾಹಿನ್‌ ವೈದ್ಯೆಯಾಗಿದ್ದುಕೊಂಡೇ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದಳು. ಡಾ.ಸಜ್ಜದ್‌ ಎಂಬ ವೈದ್ಯನನ್ನು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಬಂಧಿಸಲಾಗಿದ್ದು, ಮೂವರು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರ ವೈದ್ಯ ಉಮರ್‌ ನಬಿ ತಾಯಿ ಸೇರಿದಂತೆ 13 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಷ್ಟೇಅಲ್ಲದೆ ಬಂಧಿತರಿಂದ 12 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದ್ದು, 150ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!