Wednesday, July 15, 2026
Homeಕರಾವಳಿಮಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ಮಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

- Advertisement -
- Advertisement -

ಮಂಗಳೂರು : ಚಲಿಸುತ್ತಿದ್ದ ಕಾರೊಂದು ಬೆಂಕಿ ಹತ್ತಿಕೊಂಡ ಪರಿಣಾಮ ನಡುರಸ್ತೆಯಲ್ಲೇ ಸುಟ್ಟು ಕರಕಲಾಗಿರುವ ಘಟನೆ ಮಂಗಳೂರಿನ  ಪಿವಿ ಎಸ್ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಮುಡಿಪುವಿನಿಂದ ಬಂದಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಇನ್ನು ಕಾರು  ಪಿವಿ ಎಸ್ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಕಾರನ್ನು ನಿಲ್ಲಿಸಿ ನಾಲ್ವರು ಕಾರಿನಿಂದ ಇಳಿದಿದ್ದಾರೆ.

ಕೂಡಲೇ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!