Tuesday, July 14, 2026
Homeಕರಾವಳಿಮಂಗಳೂರುಪುತ್ತೂರು: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋದ...

ಪುತ್ತೂರು: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋದ ಕಾರು

- Advertisement -
- Advertisement -

ಪುತ್ತೂರು: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ  ನಡೆದಿದೆ.

ಬೆಂಗಳೂರಿನ ರಾಜಾಜಿನಗರ ನಿವಾಸಿ ಕಾರಿನ ಚಾಲಕ ಹರ್ಷಿತ್ ಜಿ ಅವರು ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ ಪರಿಣಾಮ ಕಾರು ರಸ್ತೆ ಬದಿ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸಿದ್ದವರಿಗೆ ಯಾವುದೇ ಗಾಯಗಳಿಲ್ಲ. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡು ಪುತ್ತೂರು   ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ 19/2026 ಕಲಂ: 281 ಬಿ.ಎನ್ ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!