- Advertisement -
![]()
- Advertisement -
ಸಕಲೇಶಪುರ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಪ್ರಪಾತಕ್ಕೆ ಬಿದ್ದ ಘಟನೆ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಭವಿಸಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾರು ರಸ್ತೆಯಿಂದ 80 ಅಡಿ ಆಳಕ್ಕೆ ಕೆಂಪು ಹೊಳೆಗೆ ಉರುಳಿ ಬಿದ್ದಿದೆ.
ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ಗೋವಿಂದ ನಾಯ್ಕ್ ಎಂಬವರ ಕುಟುಂಬ ಅಪಾಯದಿಂದ ಪಾರಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ.
ಪುತ್ರನನ್ನು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿರುವ ನವೋದಯ ಶಾಲೆಗೆ ಬಿಡಲು ಕುಟುಂಬದ ಜೊತೆ ಪ್ರಯಾಣಿಸುತ್ತಿದ್ದಾಗ ಮಾರನಹಳ್ಳಿ ಬಳಿ ತಡೆಗೋಡೆಯಿಲ್ಲದ ಕಾರಣ ನಿಯಂತ್ರಣ ತಪ್ಪಿದ ಕಾರು ಕೆಂಪು ಹೊಳೆಗೆ ಬಿದ್ದಿದೆ.
ಹೊಳೆಗೆ ಕಾರು ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.
- Advertisement -


