Friday, June 5, 2026
Homeಕರಾವಳಿಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಬಿದ್ದ ಕಾರು; ದಂಪತಿಗಳು ಪ್ರಾಣಾಪಾಯದಿಂದ ಪಾರು!

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಕಂದಕಕ್ಕೆ ಬಿದ್ದ ಕಾರು; ದಂಪತಿಗಳು ಪ್ರಾಣಾಪಾಯದಿಂದ ಪಾರು!

- Advertisement -
- Advertisement -

ಬೆಳ್ತಂಗಡಿ: ಕಾರೊಂದು ಕಂದಕಕ್ಕೆ ಬಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಗುರುವಾರ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಚಾರ್ಮಾಡಿ ಘಾಟ್ ನ 8ನೇ ತಿರುವಿನಲ್ಲಿ ಕಂದಕಕ್ಕೆ ಬಿದ್ದ ಕಾರ್ ನಲ್ಲಿ ಬಣಕಲ್ ಮೂಲದ ಜಗದೀಶ್ ಹಾಗೂ ಅವರ ಪತ್ನಿ ಇದ್ದರು ಎಂದು ಹೇಳಲಾಗಿದೆ. ಸದ್ಯ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಣಕಲ್ ನಿಂದಾ ಬೆಳ್ತಂಗಡಿ ಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳುಗಳನ್ನ ಉಜಿರೆ ಎಸ್.ಡಿ.ಎಂ.ಆಸ್ಪತ್ರೆಗೆ ರವಾನಿಸಲಾಗಿದೆ.

- Advertisement -

Latest News

error: Content is protected !!