Wednesday, June 3, 2026
Homeಚಿಕ್ಕಮಗಳೂರುಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು

ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು

- Advertisement -
- Advertisement -

ಬೆಳ್ತಂಗಡಿ: ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಕಾರು ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವಿಭಾಗದ ಮಲಯ ಮಾರುತ ತಿರುವಿನಲ್ಲಿ ಪಲ್ಟಿಯಾದ ಘಟನೆ ಮಾ.27 ರಂದು ಗುರುವಾರ ಸಂಜೆ ನಡೆದಿದೆ.

ದಟ್ಟ ಮಂಜು ಕವಿದ ವಾತಾವರಣದಲ್ಲಿ ಸ್ವಿಫ್ಟ್ ಕಾರು ತಿರುವಿನಲ್ಲಿ ಪಲ್ಟಿಯಾಗಿ ಸುಮಾರು 60 ಅಡಿಗಳ ಪ್ರಪಾತಕ್ಕೆ ಬಿದ್ದಿದೆ. ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಲಾಗಿದೆ. ಸ್ಥಳೀಯರು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!