Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡು: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ನಾಲ್ವರಿದ್ದ ಕಾರು

ಕಾಸರಗೋಡು: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ನಾಲ್ವರಿದ್ದ ಕಾರು

- Advertisement -
- Advertisement -

ಕಾಸರಗೋಡು: ಕಾರೊಂದು ನಿಯಂತ್ರಣ ತಪ್ಪಿ ಬಾವಿಗೆ ಬಿದ್ದು, ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ ಪಾರಾಗಿರುವ ಘಟನೆ ಕಾಸರಗೋಡಿನ ಬೇಕಲ ಸಮೀಪದ ಪೂಚಕ್ಕಾಡ್ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ.
ಅತೀ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿದ್ದ ಆವರಣವಿಲ್ಲದ ಬಾವಿಗೆ ಬಿದ್ದಿದೆ. ಕೂಡಲೇ ಅಲ್ಲೇ ಇದ್ದ ಸಾರ್ವಜನಿಕರು ಕಾರಿನಲ್ಲಿದ್ದ ಮೂವರು ರಕ್ಷಿಸಿದ್ದಾರೆ. ಮತ್ತೋರ್ವನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.ಅರ್ಧ ಮುಳುಗಿದ್ದ ಸ್ಥಿತಿಯಲ್ಲಿದ್ದ ಕಾರಿನಲ್ಲಿದ್ದ ನಾಲ್ವರನ್ನು ಕಾರಿನ ಗಾಜು ಹಾಗೂ ಬಾಗಿಲು ಒಡೆದು ರಕ್ಷಿಸಲಾಗಿದೆ.

- Advertisement -

Latest News

error: Content is protected !!