Thursday, June 4, 2026
Homeಅಪರಾಧನೆಲ್ಯಾಡಿ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ

ನೆಲ್ಯಾಡಿ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ

- Advertisement -
- Advertisement -

ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲವತ್ತಡ್ಕ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ಸಾಗಾಟದ ಲಾರಿಗೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವ ಪ್ರಯಾಣಿಕನಿಗೂ ಯಾವುದೇ ರೀತಿಯ ಗಾಯವಾಗಿಲ್ಲ. ತುಂತುರು ಮಳೆ ಬರುತ್ತಿದ್ದ ಕಾರಣ ಎದುರಿನಿಂದ ಬರುತ್ತಿದ್ದ ಲಾರಿ ಗಮನಕ್ಕೆ ಬಾರದೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

- Advertisement -

Latest News

error: Content is protected !!