- Advertisement -


- Advertisement -
ಉಪ್ಪಿನಂಗಡಿ ಸಮೀಪದ ಪೆರ್ನೆಯ ಮೈರಕಟ್ಟೆ ಎಂಬಲ್ಲಿ ಜುಲೈ 28ರಂದು ನಿಂತಿದ್ದ ಟಿಪ್ಪರ್ ಒಂದರ ಹಿಂಬದಿಗೆ ಕಾರು ಢಿಕ್ಕಿಯಾಗಿ, ನಾಲ್ಕು ವರ್ಷದ ಮಗು ಸೇರಿದಂತೆ ಐವರು ಗಾಯಗೊಂಡಿದ್ದಾರೆ.
ಮೂಲತಃ ಫರಂಗಿಪೇಟೆಯವರಾದ ಪ್ರಯಾಣಿಕರು ಫರಂಗಿಪೇಟೆಯಿಂದ ಉಪ್ಪಿನಂಗಡಿ ಕಡೆಗೆ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಟಿಪ್ಪರ್‌ಗೆ ಅಪಘಾತಕ್ಕೀಡಾಗಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ ಮೊಹಮ್ಮದ್ ಫಾರೂಕ್ (31), ಪ್ರಯಾಣಿಕರಾದ ಫಾತಿಮತ್ ತಸ್ಪಿಯಾ (25), ಜುಲೈಕಾ (52), ಮಹಮ್ಮದ್ ಅಫ್ವಾನ್ (15) ಹಾಗೂ ನಾಲ್ಕು ವರ್ಷದ ಮಹಮ್ಮದ್ ಇಲ್ಹಾನ್ ಗಾಯಗೊಂಡಿದ್ದಾರೆ.
ಈ ದುರ್ಘಟನೆ ಕುರಿತು ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


