Wednesday, June 24, 2026
Homeಕರಾವಳಿಭಟ್ಕಳ ಸಮೀಪ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಮೃತ್ಯು

ಭಟ್ಕಳ ಸಮೀಪ ಕಾರು-ಲಾರಿ ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಮೃತ್ಯು

- Advertisement -
- Advertisement -

ಭಟ್ಕಳ: ತಾಲೂಕಿನ ಮೂಡ ಭಟ್ಕಳ ಬೈಪಾಸ್ ಬ್ರಿಡ್ಜ್ ಸಮೀಪ ಕಾರು ಹಾಗೂ ಲಾರಿ ನಡುವೆ ಆಕ್ಸಿಡೆಂಟ್ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಮಹಿಳೆ ಉಡುಪಿಯ ಉದ್ಯಾವರ ನಿವಾಸಿ ರೀಟಾ ಡಿಸೋಜಾ ಹಾಗೂ ತೀವ್ರ ಗಾಯಗೊಂಡವರನ್ನು ಮೃತ ಮಹಿಳೆಯ ಪತಿ ಜೇವಿಯ‌ ರಾಜ್ ಡಿಸೋಜಾ ಮತ್ತು ಪುತ್ರಿ ಇನ್ನಿಕಾ ಎಂದು ತಿಳಿದು ಬಂದಿದೆ.

ಒಂದೇ ಕುಟುಂಬದ ಮೂವರು ಕಾರಿನಲ್ಲಿ ಉಡುಪಿ ಕಡೆಯಿಂದ ಗೋವಾ ಕಡೆಗೆ ಹೋಗುವ ವೇಳೆ ಮುರುಡೇಶ್ವರ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಅಪಘಾತವಾಗಿದೆ.

ಘಟನೆ ನಡೆದ ತಕ್ಷಣವೇ ಸ್ಥಳೀಯರು ಕಾರಿನಲ್ಲಿ ಸಿಲುಕಿಕೊಂಡು ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಗಂಭೀರವಾಗಿ ಗಾಯಗೊಂಡ ರೀಟಾ ಅವರು ಚಿಕಿತ್ಸೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಕಾರು ಚಲಾಯಿಸುತ್ತಿದ್ದ ಜೇವಿಯರ್ ಅವರು ಗಂಭೀರವಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರಿ ಇನ್ನಿಕಾಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!