Thursday, June 4, 2026
Homeಕರಾವಳಿನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ತಪ್ಪಿದ ಭಾರೀ ದುರಂತ

ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ತಪ್ಪಿದ ಭಾರೀ ದುರಂತ

- Advertisement -
- Advertisement -

ಬೆಳ್ತಂಗಡಿ: ಗರ್ಡಾಡಿ ಕೊಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಎಂಬಲ್ಲಿ ಮಾ. 29ರಂದು ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಸಂಭವಿಸಿದೆ.

ಕಾರೊಂದು ವೇಣೂರು ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ಚರಂಡಿಗೆ ಬಿದ್ದಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್‌ ಕಂಬ ಧರೆಗೆ ಉರುಳಿದೆ.

ಅದೃಷ್ಟಾವಶತ್ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಲೈನ್‌ ಚಾರ್ಜ್‌ ಇತ್ತು. ತತ್‌ಕ್ಷಣವೇ ಸ್ಥಳೀಯರು ಮೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಮಡಂತ್ಯಾರು ಮೂಲದ ಕಾರು ಇದಾಗಿದ್ದು ದೇವಸ್ಥಾನದಿಂದ ಮರಳಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

- Advertisement -

Latest News

error: Content is protected !!