Thursday, September 17, 2026
Homeಕರಾವಳಿನಿಯಂತ್ರಣ ತಪ್ಪಿ ಕಾರು ಪಲ್ಟಿ; ಸಣ್ಣಪುಟ್ಟ ಗಾಯಗಳಿಂದ ವಿದ್ಯಾರ್ಥಿ ಪಾರು

ನಿಯಂತ್ರಣ ತಪ್ಪಿ ಕಾರು ಪಲ್ಟಿ; ಸಣ್ಣಪುಟ್ಟ ಗಾಯಗಳಿಂದ ವಿದ್ಯಾರ್ಥಿ ಪಾರು

- Advertisement -
- Advertisement -

ಕೊಣಾಜೆ: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗೆ ನಾಟೆಕಲ್ ಸಮೀಪದ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ಸಂಭವಿಸಿದೆ.

ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ಸ್ವಿಫ್ಟ್ ಕಾರಿನಲ್ಲಿ ದೇರಳಕಟ್ಟೆಯಿಂದ ಪನೀರು ರಸ್ತೆಯ ಮೂಲಕ ಬೀರಿ ಕಡೆಗೆ ತೆರಳುತ್ತಿದ್ದ ವೇಳೆ, ಪನೀರು ಚರ್ಚ್ ಬಳಿಯ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಪಲ್ಟಿಯಾದ ಕಾರು ಸಮೀಪದ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿ ನಿಂತಿದ್ದು, ಅದೃಷ್ಟವಶಾತ್ ಚಾಲಕ ಯಾವುದೇ ಗಂಭೀರ ಅಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!