Wednesday, July 15, 2026
HomeUncategorizedಚಾರ್ಮಾಡಿ ಘಾಟ್ ನಲ್ಲಿ ಬೆಳಗ್ಗಿನ ಜಾವ ಹೊತ್ತಿ ಉರಿದ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು

ಚಾರ್ಮಾಡಿ ಘಾಟ್ ನಲ್ಲಿ ಬೆಳಗ್ಗಿನ ಜಾವ ಹೊತ್ತಿ ಉರಿದ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು

- Advertisement -
- Advertisement -

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಮಳೆ ಮಧ್ಯೆಯೂ ಕಾರು ಹೊತ್ತಿ ಉರಿದಿದೆ‌.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಕಲ್ ದೇವಸ್ಥಾನದ ಬಳಿ ಅವಘಡ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕುಟುಂಬವೊಂದು ಚಾರ್ಮಾಡಿ ಘಾಟ್ ನಲ್ಲಿ ತೆರಳುತ್ತಿದ್ದ ವೇಳೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ನಾಲ್ವರು ಹೊರಗೆ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗ್ಗಿನ ಜಾವ ಎರಡು ಗಂಟೆ ವೇಳೆಗೆ ಬೆಂಕಿ ಅನಾಹುತ ನಡೆದಿದೆ. ಘಟನಾಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!