Wednesday, June 3, 2026
Homeಕರಾವಳಿಉಡುಪಿಕಾರ್ಕಳ; ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ವಿಸ್ತರಣೆ

ಕಾರ್ಕಳ; ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ವಿಸ್ತರಣೆ

- Advertisement -
- Advertisement -

ಕಾರ್ಕಳ; ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ವಿಸ್ತರಣೆ ಮಾಡಲಾಗಿದೆ.

ಆರೋಪಿಗಳಾದ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಇಂದು ಆದೇಶ ನೀಡಿದೆ.

ಬಂಧಿತ ಪ್ರತಿಮಾಳನ್ನು ಪೊಲೀಸರು ಅ.25ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ.7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಈ ವೇಳೆ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್ ಹೆಗ್ಡೆಯನ್ನು ಪೊಲೀಸರು ಅ.28ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಇವರಿಬ್ಬರ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಬಿಗಿ ಭದ್ರತೆಯಲ್ಲಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಇಬ್ಬರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಿದರು.

- Advertisement -

Latest News

error: Content is protected !!