Sunday, June 30, 2024
Homeಕರಾವಳಿಮಂಗಳೂರುಉಪ್ಪಿನಂಗಡಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ; ವೃತ್ತಿ ಬೆಳವಣಿಗೆಗೆ ಉನ್ನತ ವ್ಯಾಸಂಗ ಅನಿವಾರ್ಯ: ರಾಬಿನ್...

ಉಪ್ಪಿನಂಗಡಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ; ವೃತ್ತಿ ಬೆಳವಣಿಗೆಗೆ ಉನ್ನತ ವ್ಯಾಸಂಗ ಅನಿವಾರ್ಯ: ರಾಬಿನ್ ಶಿಂಧೆ

spot_img
- Advertisement -
- Advertisement -

ಉಪ್ಪಿನಂಗಡಿ : ವೃತ್ತಿ ಬೆಳವಣಿಗೆಗೆ ಉನ್ನತ ವ್ಯಾಸಂಗ ಅನಿವಾರ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಇಲ್ಲಿನ ಎಂ ಬಿ ಎ ವಿಭಾಗದ ನಿರ್ದೇಶಕರಾದ ಡಾ. ರಾಬಿನ್ ಮನೋಹರ್ ಶಿಂಧೆ ಹೇಳಿದರು.

ಇವರು ಇತ್ತೀಚೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸ ಕೋಶಗಳ ಸಹಯೋಗದೊಂದಿಗೆ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.

ಅಂತಿಮ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಪದವಿ ಶಿಕ್ಷಣದ ನಂತರದ ಉನ್ನತ ವ್ಯಾಸಂಗ ಅವಕಾಶಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಲಾಯಿತು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ವಿವೇಕಾನಂದ ಕಾಲೇಜಿನ ಎಂ ಬಿ ಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಜೀವಿತ ಬಿ ವಿ ವಿದ್ಯಾಥಿಗಳಿಗೆ ಎಂಬಿಎ ದಾಖಲಾತಿಗೆ ಸಂಬಂಧಿಸಿದ ಪ್ರವೇಶಾತಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುಬ್ಬಪ್ಪ ಕೆ ಇವರ ಮಾರ್ಗದರ್ಶನದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಹರಿಪ್ರಸಾದ್ ಎಸ್ ಸಂಘಟಿಸಿದರು.

ಐಕ್ಯೂಏಸಿ ಸಂಚಾಲಕರಾದ ಶ್ರೀ ದಶರಥ ಕೆ ಟಿ, ವಾಣಿಜ್ಯ ಸಂಘದ ಸಂಚಾಲಕರಾದ ಶ್ರೀ ಅಹಮದ್ ಎಸ್ ಎಂ, ವಾಣಿಜ್ಯ ವಿಭಾಗದ ಉಪನ್ಯಾಸಕರುಗಳಾದ ಶ್ರೀ ರಮೇಶ್ ಮೂಲ್ಯ ಮತ್ತು ಶ್ರೀಮತಿ ಗಾಯತ್ರಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!