Sunday, June 7, 2026
Homeತಾಜಾ ಸುದ್ದಿಬಿಜೆಪಿ ಸೇರಿದ ಕೆ.ಅಣ್ಣಾಮಲೈ ವಿರುದ್ಧ ಪೊಲೀಸ್ ಕೇಸ್ ದಾಖಲು

ಬಿಜೆಪಿ ಸೇರಿದ ಕೆ.ಅಣ್ಣಾಮಲೈ ವಿರುದ್ಧ ಪೊಲೀಸ್ ಕೇಸ್ ದಾಖಲು

- Advertisement -
- Advertisement -

ಚೆನ್ನೈ: ಲಾಕ್ ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಸೇರಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗುರುವಾರ ಕೆ. ಅಣ್ಣಾಮಲೈ ಸಭೆ ನಡೆಸಿದ್ದಾರೆ ಎಂಬುದು ಆರೋಪ. ಕೊಯಮತ್ತೂರು ನಗರ ಠಾಣೆ ಪೊಲೀಸರು ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಬಿಜೆಪಿ ಸೇರಿದ ಬಳಿಕ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಗೆ ಗುರುವಾರ ಅಣ್ಣಾಮಲೈ ಭೇಟಿ ನೀಡಿದ್ದರು. ಬಹಳಷ್ಟು ಕಾರ್ಯಕರ್ತರು ಕಚೇರಿಯಲ್ಲಿ ಸೇರಿ ಅವರನ್ನು ಸ್ವಾಗತಿಸಿದ್ದರು.

ಕೆ.ಅಣ್ಣಾಮಲೈ ಹಾಗೂ ಇತರ ಬಿಜೆಪಿ ಕಾರ್ಯಕರ್ತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 269, 270, 285, 341 ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೋವಿಡ್ 19 ಹರಡದಂತೆ ಇರುವ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ಕಚೇರಿಯಲ್ಲಿ ಬಹಳಷ್ಟು ಜನರು ಸೇರಿದ್ದರು. ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಅಣ್ಣಾಮಲೈ ವಾಹನದಿಂದಲೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುಗನ್ಯಾ ಅವರು ಈ ಕುರಿತು ದೂರು ನೀಡಿದ್ದರು. ಕೆ. ಅಣ್ಣಾಮಲೈ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ನಂದಕುಮಾರ್, ಬಿಜೆಪಿ ನಾಯಕರಾದ ಜಿಕೆಎಸ್ ಸೆಲ್ವಕುಮಾರ್ ಮುಂತಾದವರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!