Sunday, June 7, 2026
Homeಕರಾವಳಿಮಂಗಳೂರು ವಿವಿ ಕಾಲೇಜಿನಲ್ಲಿ ಸಾವರ್ಕರ್ ಫೋಟೋ ವಿವಾದ ಪ್ರಕರಣ: ಹೊಡೆದಾಡಿಕೊಂಡ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ಮಂಗಳೂರು ವಿವಿ ಕಾಲೇಜಿನಲ್ಲಿ ಸಾವರ್ಕರ್ ಫೋಟೋ ವಿವಾದ ಪ್ರಕರಣ: ಹೊಡೆದಾಡಿಕೊಂಡ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಘಟಕ ಕಾಲೇಜಿನಲ್ಲಿ ವೀರ ಸಾವರ್ಕರ್ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜಿನಲ್ಲಿ ಹೊಡೆದಾಡಿಕೊಂಡ ಆರು ಮಂದಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಮರ್ಕಝ್, ಅಬೂಬಕ್ಕರ್ ಸಿದ್ಧೀಕ್, ಮಹಮ್ಮದ್ ಅಫಾಜ್.
ಪ್ರಜನ್, ಸ್ವಸ್ತಿಕ್ ಮತ್ತು ಗುರುಕಿರಣ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.

ತರಗತಿ ಒಳಗೆ ಸಾವರ್ಕರ್ ಫೋಟೋ ಅಳವಡಿಕೆಗೆ ಸಂಬಂಧಿಸಿದಂತೆ ನಡೆದ ಘಟನೆಯಾಗಿದ್ದು, ನಿನ್ನೆ ಮಧ್ಯಾಹ್ನ ಊಟದ ವಿರಾಮ ವೇಳೆ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದರು.

ಕ್ಲಾಸ್ ರೂಂ ನಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಸಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

- Advertisement -

Latest News

error: Content is protected !!