- Advertisement -
- Advertisement -
ಮಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಇಂದು ಪ್ರತಿಭಟನೆ ನಡೆಸಿದ್ದ ಹಿಂದೂ ಹಿತರಕ್ಷಣಾ ಸಮಿತಿ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆದಿದ್ದ ಪ್ರತಿಭಟನೆ ಸಂಬಂಧವಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ ವೇಳೆ ಹಿಂದೂ ಕಾರ್ಯಕರ್ತರು ರಸ್ತೆಗೆ ಇಳಿದು ವಾಹನ ಸಂಚಾರಕ್ಕೆ ಅಡ್ಡಿ ಮಾಡಿ ರಸ್ತೆ ತಡೆಯಿಂದಾಗಿ ಆಂಬುಲೆನ್ಸ್ ವಾಹನ ಸಂಚಾರಕ್ಕೂ ತಡೆ ಉಂಟಾಗಿತ್ತು.
ಅಲ್ಲದೇ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ ದಾಟಿ ಬಂದು ರಸ್ತೆ ತಡೆ ಮಾಡಿದ್ದ ಹಿಂದೂ ಕಾರ್ಯಕರ್ತರು ಕರ್ತವ್ಯ ನಿರತ ಪೊಲೀಸರಿಗೂ ಅಡ್ಡಿಪಡಿಸಿದ ಆರೋಪದಡಿ ಆಯೋಜಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- Advertisement -