ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು(ಇಂದು) ಬೆಳಿಗ್ಗೆ ಮೃತಪಟ್ಟಿದ್ದ ಪ್ರಕರಣ ಸಂಬಂಧ ಎರಡನೇ ಆರೋಪಿ ದೈಹಿಕ ಶಿಕ್ಷಕನನ್ನು ಬಂಧಿಸಿ ರಾತ್ರಿ ಮಂಗಳೂರು ಸೆಕ್ಷನ್ ನ್ಯಾಯಾಲಯದ ನ್ಯಾಯಧೀಶರ ನಿವಾಸಕ್ಕೆ ಹಾಜರುಪಡಿಸಿದ್ದು ನ್ಯಾಯಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಖಾಸಗಿ ಶಾಲೆಯ ಡ್ರಾಯಿಂಗ್ ಶಿಕ್ಷಕ ಮೊದಲ ಆರೋಪಿ ರೂಪೇಶ್ ಪೂಜಾರಿಯನ್ನು ಫೆ.8 ರಂದು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಕ್ಷನ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿ ಬಿಡುಗಡೆ ಮಾಡಿತ್ತು.ಇದೀಗ ವಿದ್ಯಾರ್ಥಿನಿ ಸಾವನ್ನಪ್ಪಿದ ಬಳಿಕ ಪ್ರಕರಣದ ಎರಡನೇ ಆರೋಪಿ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ಸದಾನಂದ(45) ಎಂಬಾತನನ್ನು ಫೆ.12 ರಂದು(ಇಂದು) ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಕ್ಷನ್ ನ್ಯಾಯಾಲಯದ ಜಡ್ಜ್ ನಿವಾಸಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮೃತಪಟ್ಟ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಶಿಕ್ಷಕರ ವಿರುದ್ಧ IPC 354D,509,POSO Act 12 ,75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.