ಪುತ್ತೂರು; ಮಂಗಳೂರಿನಿಂದ ಪುತ್ತೂರಿಗೆ ಬರುವಾಗ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನ ಮಹಮ್ಮದ್ ತೌಹೀದ್ ಬಂಧಿತ ಆರೋಪಿ.
ವಿದ್ಯಾರ್ಥಿನಿ ದಿನಾಂಕ: 22-07-2025 ರಂದು ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರಿಗೆ ಬರುವ ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಾ ಸಾಯಂಕಾಲ ಸುಮಾರು 6:30 ಗಂಟೆಗೆ ಬಸ್ ಬಂಟ್ವಾಳ ತಾಲೂಕಿನ ಮಾಣಿ ಬಳಿ ತಲುಪಿದಾಗ ವಿದ್ಯಾರ್ಥಿನಿ ಬಳಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ಆ ವೇಳೆ ವಿದ್ಯಾರ್ಥಿನಿ ಆತನಿಗೆ ಬೈದಿದ್ದಾಳೆ. ಈ ವಿಚಾರವನ್ನು ವಿದ್ಯಾರ್ಥಿನಿ ತನ್ನ ತಂದೆಗೆ ಫೋನ್ ಮುಖಾಂತರ ತಿಳಿಸಿದ್ದು, ಬಸ್ ಪುತ್ತೂರು ಕೆಎಸ್‌ಅರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಾಗ ಆ ವ್ಯಕ್ತಿಯು ಬಸ್ಸಿನ ತುರ್ತು ನಿರ್ಗಮನ ಕಿಟಕಿಯ ಮೂಲಕ ಹಾರಲು ಪ್ರಯತ್ನಿಸಿದ್ದಾನೆ. ಆಗ ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.


